ಮಳೆಗೆ ಗೋಡೆ ಕುಸಿದು ಕಾರ್ಮಿಕ ಸಾವು… ಬೆಂಗಳೂರು,ನವೆಂಬರ್,6,2020(..): ನಿನ್ನೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಪೂರಂಪೂಜಾರಿ(19) ಮೃತಪಟ್ಟ ಕಾರ್ಮಿಕ. ಇಸ್ಕಾನ್ ಬಳಿ ಖಾಸಗಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದಿದ್ದು ಈ ವೇಳೆ ಪೂರಂಪೂಜಾರಿ ಮೃತಪಟ್ಟಿದ್ಧಾನೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –- -