ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರಗೆ ಕೊರೋನಾ ಸೋಂಕು ದೃಢ…. ಬೀದರ್,ನವೆಂಬರ್,5,2020(..):ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಬಂಡೆಪ್ಪ ಖಾಶೆಂಪುರ ಅವರೇ ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ನನಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 4-5 ದಿನಗಳಿಂದ ನನ್ನ ನೇರ ಸಂಪರ್ಕ ಹೊಂದಿರುವ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಿ ಎಂದು ಬಂಡೆಪ್ಪ ಕಾಶೆಂಪೊರ ಮನವಿ ಮಾಡಿದ್ದಾರೆ. ತಾಯಿ ಭವಾನಿ ಮಾತೆ ಆಶೀರ್ವಾದ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗಿ ಬಂದು ಸದಾ ನಿಮ್ಮ ಸೇವೆಗೆ ಸಿದ್ದ ಇರುತ್ತಾನೆ ಎಂದು ಬಂಡೆಪ್ಪ ಖಾಶೆಂಪುರ ತಿಳಿಸಿದ್ಧಾರೆ. : – -