ಜೆಡಿಎಸ್ ಗೆ ಒಲಿದ ಕೊರಟಗೆರೆ ಪಟ್ಟಣ ಪಂಚಾಯಿತಿ ಆಡಳಿತ ಚುಕ್ಕಾಣಿ… ತುಮಕೂರು,ನವೆಂಬರ್,5,2020(..):ಬಾರಿ ಕುತೂಹಲ ಕೆರಳಿಸಿದ್ದ ಕೊರಟಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅಧಿಕಾರದ ಗದ್ದುಗೆಗೇರುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಸ್ವ ಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯಿತಿ ಆಡಳಿತದ ಚುಕ್ಕಾಣಿ ಜೆಡಿಎಸ್ ಪಾಲಾಗಿದೆ. ಗುರುವಾರ ನಿಗದಿಯಾಗಿದ್ದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ನ ಮಂಜುಳ ಸತ್ಯನಾರಾಯಣ ಅಧ್ಯಕ್ಷೆಯಾಗಿ ಮತ್ತು ಉಪಾಧ್ಯಕ್ಷೆಯಾಗಿ ಭಾರತಿ ಸಿದ್ದಮಲ್ಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. : - - - – -