ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಹಿನ್ನೆಲೆ: ಕೈ ಕಾರ್ಯಕರ್ತರಿಂದ ಪ್ರತಿಭಟನೆ.. ಧಾರವಾಡ,ನವೆಂಬರ್ 5,2020(..):ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ವಶಕ್ಕೆ ಪಡೆದಿರುವ ಹಿನ್ನೆಲೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಕುಲಕರ್ಣಿ. ಆಪ್ತ ಶ್ರೀಶ ಪಾಟೀಲ್ ರನ್ನ ಸಿಬಿಐ ವಿಚಾರಣೆ ನಡೆಸುತ್ತಿದೆ. ವಿನಯ್ ಕುಲಕರ್ಣಿ ಅವರನ್ನ ವಶಕ್ಕೆ ಪಡೆದಿರುವುದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ಉಪನಗರ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. : --- –-