ಬೆಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ… ಬೆಂಗಳೂರು,ನವೆಂಬರ್ 5,2020(..):ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ನನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಜಯ್ ಬಂಧಿತ ಆರೋಪಿ. ಈತ ವಿದೇಶದಿಂದ ಡಾರ್ಕ್ ನೆಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಬಿಟ್ ಕಾಯಿನ್ ಮೂಲಕ ಹಣ ಪಾವತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಆರೋಪಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಬಂಧಿತ ಸುಜಯ್ ನಿಂದ 15 ಲಕ್ಷ ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. : - - – .