ರಾಜ್ಯದಲ್ಲಿ ಶಾಲೆ ಆರಂಭ ವಿಚಾರ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೊಟ್ಟ ಸಲಹೆ ಏನು ಗೊತ್ತೆ…..? ಮೈಸೂರು,ನವೆಂಬರ್,4,2020(..):ಕೊರೋನಾ ಸಂಕಷ್ಟದ ನಡುವೆ ಶಾಲೆ ಆರಂಭಿಸಲು ಚಿಂತನೆ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯದಲ್ಲಿ ಈ ವರ್ಷ ಶಾಲೆ ಆರಂಭ ಬೇಡ. ಇದು ಸರ್ಕಾರಕ್ಕೆ ನನ್ನ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಪಾಸ್ ಮಾಡಲಿ. ಕೊರೋನಾ ಮುಕ್ತವಾದ ನಂತರ ಶಾಲೆಗಳನ್ನ ಆರಂಭಿಸಲಿ ಎಂದು ಹೇಳಿದ್ದಾರೆ. ಬೈ ಎಲೆಕ್ಷನ್ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಶಿರಾ ಕ್ಷೇತ್ರದಲ್ಲಿ ಟಿ.ಬಿ ಜಯಚಂದ್ರ ಗೆಲ್ಲಲಿದ್ದಾರೆ. ಆರ್.ಆರ್ ನಗರದಲ್ಲಿ ಕುಸುಮಾ ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ ಪರವಾಗಿ ಜನ ಮತ ಹಾಕಿದ್ದಾರೆ ಎಂದು ತಿಳಿಸಿದರು. : –- – - - - -.