ನಟಿಯರಾದ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್… ಬೆಂಗಳೂರು,ನವೆಂಬರ್,3,2020(..):ಡ್ರಗ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ಮತ್ತು ಸಂಜನಾ ಕಳೆದ ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿದ್ದು, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಅಕ್ಟೋಬರ್ 24 ರಂದು ಜಾಮೀನು ಆದೇಶವನ್ನ ಕಾಯ್ದಿರಿಸಿತ್ತು. ಇದೀಗ ಇಂದು ಈ ಬಗ್ಗೆ ಆದೇಶ ನೀಡಿದೆ. ನಟಿಯರಿಬ್ಬರಿಗೂ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಇಂದು ಮಧ್ಯಾಹ್ನ ನ್ಯಾ. ಶ್ರೀನಿವಾಸ್​ ಹರೀಶ್​ ಕುಮಾರ್​ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ. ಹೀಗಾಗಿ ನಟಿಯರಿಬ್ಬರೂ ಇದೀಗ ಸುಪ್ರೀಂಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಅಷ್ಟು ದಿನಗಳ ಕಾಲ ಇಬ್ಬರು ನಟಿಯರು ಪರಪ್ಪನ ಅಗ್ರಹಾರದಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ. : - - – - -.