ಮಲೆ ಮಹದೇಶ್ವರ ಬೆಟ್ಟಕ್ಕೆ ವಿಧಿಸಿದ್ದ ನಿರ್ಬಂಧ ತೆರವು ಚಾಮರಾಜನಗರ,ನವೆಂಬರ್,02,202(..): ಕೊರೊನಾದಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ದ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ಇಂದು ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಅನ್ನ ದಾಸೋಹ ಮತ್ತು ಜಾತ್ರೆಗಳು ಆರಂಭವಾಗಲಿದೆ ದೇವಾಲಯದ ಎಲ್ಲ ಸೇವೆಗಳನ್ನು ಪುನರ್ ಆರಂಭಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಸಹ ಹೊರಡಿಸಿದ್ದಾರೆ. ದೇವಸ್ಥಾನದಲ್ಲಿ ಅನ್ನ ದಾಸೋಹ ಮತ್ತು ಜಾತ್ರೆಗಳು ಆರಂಭವಾಗಲಿದೆ. ಜೊತೆಗೆ, ಇಂದಿನಿಂದಲೇ ಅಭಿಷೇಕ ಹಾಗೂ ಎಲ್ಲಾ ಪೂಜಾ ಕೈಂಕರ್ಯಗಳು ಮತ್ತು ಇತರೆ ಸೇವೆಗಳು ಭಕ್ತರಿಗೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ. : ---