ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್. ಚಿತ್ರದುರ್ಗ, ಏಪ್ರಿಲ್ 15,2024 (..): ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ತೆರಳುತ್ತಿದ್ದ ವೇಳೆ ಸಚಿವ ಜಮೀರ್ ಅಹಮ್ಮದ್​ ಖಾನ್​ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಅವರು ಇಂದು ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಸಚಿವ ಜಮೀರ್ ಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಜಮೀರ್ ಅಹಮ್ಮದ್ ಖಾನ್ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಜಮೀರ್ ಅಹಮ್ಮದ್ ಖಾನ್ ಅವರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಿದ್ದು ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ ಎಂದು ತಿಳಿದುಬಂದಿದೆ. ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಎಂದು ಬಂದಿದೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. : , , ,