ಸೊಸೆಯಿಂದ ಮಾರಣಾಂತಿಕ ಹಲ್ಲೆ : ಅತ್ತೆ, ಮಾವ ಸೇರಿ ಮೂವರ ಸಾವು ಮಂಡ್ಯ,ನವೆಂಬರ್,01,2020(..): ಸೊಸೆಯಿಂದ ಅತ್ತೆ, ಮಾವ ಸೇರಿದಂತೆ ಗಂಡನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಗಂಡನ ಸಾವಿನ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಅತ್ತೆ, ಮಾವ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿಯಲ್ಲಿ 15 ದಿನದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಅತ್ತೆ-ಮಾವನ ಮೇಲೆ ಸೊಸೆ ನಾಗಮಣಿ ತುರಿಮಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಅಕ್ಟೋಬರ್ 21ರಂದು ಚಿಕಿತ್ಸೆ ಫಲಕಾರಿಯಾಗದೆ ಪತಿ ನಾಗರಾಜು(50) ಮೃತಪಟ್ಟಿದ್ದರು. ರಾತ್ರಿ ಅತ್ತೆ ಕುಳ್ಳಮ್ಮ(69), ಮಾವ ವೆಂಕಟೇಗೌಡ(80) ಚಿಕಿತ್ಸೆ ಫಲಿಸದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂವರ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. : ------