ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಶುಭಾಶಯ ಕೋರಿ ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್ ಮೈಸೂರು,ನವೆಂಬರ್,01,2020(..): ರಾಜ್ಯಾದ್ಯಂತ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ರಾಜ್ಯದ ಜನತೆಗೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೇಮ ಮೆರೆದಿದ್ದಾರೆ. ಸಿಎಂ ಬಿಎಸ್ ವೈ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಸಂಸದ ಪ್ರತಾಪ್ ಸಿಂಹ ರಿಂದ ಅನೇಕರು 65 ನೇ ರಾಜ್ಯೋತ್ಸವಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಶುಭಾಶಯದ ಜೊತೆ ಕನ್ನಡದ ಅಸ್ಮಿತೆ ಉಳಿಸುವ ಜೊತೆ ಕನ್ನಡವನ್ನು ಉಳಿಸಿ ಬೆಳಸುವಂತೆ ಮನವಿ ಮಾಡಿದ್ದಾರೆ. : ---- - -