ರಾಜ್ಯದಲ್ಲಿ ಹೊಸದಾಗಿ 3014 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ.. ಬೆಂಗಳೂರು,ಅಕ್ಟೋಬರ್,31,2020(..):ರಾಜ್ಯದಲ್ಲಿ ಇಂದು ಹೊಸದಾಗಿ 3014 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಇಂದು ಹೊಸದಾಗಿ 3014 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. : -3014 - - -