ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ: ಆರೋಪಿ ಅರೆಸ್ಟ್… ಮಂಗಳೂರು,ಅಕ್ಟೋಬರ್,29,2020(..):ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಬುಬಕರ್ ಸಿದ್ಧಿಕ್ ಬಂಧಿತ ಆರೋಪಿ. ಬಂಧಿತನಿಂದ 32,96,300 ರೂ ಮೌಲ್ಯದ 614 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದ. ಈ ವೇಳೆ ಮಂಗಳೂರು ಏರ್ ಪೋರ್ಟ್ ನಲ್ಲಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯವನಾದ ಅಬುಬಕ್ಕರ್ ಸಿದ್ದಿಕ್ ದುಬೈನಿಂದ ಮಂಗಳೂರಿಗೆ ಬಂದಿದ್ದು ಆತ ಚಿನ್ನ ಸಾಗಿಸುತ್ತಿರುವುದು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ತಿಳಿದು ಬಂದಿದೆ. 32.96 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. : – – – -