ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ- ಸಚಿವ ಡಾ.ಕೆ.ಸುಧಾಕರ್… ಚಿಕ್ಕಬಳ್ಳಾಪುರ, ಅಕ್ಟೋಬರ್,28,2020(..):ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳತ್ತ ಜನರಿಗೆ ನಂಬಿಕೆ ಬರುವಂತೆ ಮಾಡುತ್ತಿದ್ದೇವೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಸಚಿವ ಡಾ.ಕೆಸುಧಾಕರ್, ಯಾವುದೇ ಸಂದರ್ಭದಲ್ಲೂ ಕೊರೋನಾ ಲಸಿಕೆ ಸಿಗಲಿದೆ. ಕೊರೋನಾ ಲಸಿಕೆ ಸಿಗುವ ಮುನ್ಸೂಚನೆ ಇದ್ದು ಈ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಇನ್ನು ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಈಗಾಗಲೇ ಗೆದ್ದಿದ್ದಾರೆ. 30 ಸಾವಿರ ಮತಗಳ ಅಂತರದಿಂದ ಅವರು ಗೆಲ್ಲುವ ನಿರೀಕ್ಷೆ ಇದೆ. ಶಿರಾಕ್ಷೇತ್ರದಲ್ಲೂ ಬಿಜೆಪಿ ಖಾತೆ ತೆರಯಲಿದೆ. ಎಂದು ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು. : – - - -. . .