ಮೈಸೂರಿನ ನಾಲ್ವರು ಸಾಧಕರಿಗೆ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ…. ಮೈಸೂರು,ಅಕ್ಟೋಬರ್,28,2020(..):ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 65 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ನಡುವೆ ಮೈಸೂರಿನ ನಾಲ್ವರು ಸಾಧಕರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಧ್ವಿ ಪತ್ರಿಕೆಯ ಸಂಪಾದಕ ಸಿ.ಮಹೇಶ್ವರನ್, ಶಿಕ್ಷಣ ಕ್ಷೇತ್ರದ ಡಾ. ಪುಟ್ಟಸಿದ್ದಯ್ಯ, ಆಯುರ್ವೇದ ವೈದ್ಯರಾದ ಡಾ. ಚಂದ್ರಶೇಖರ್ ಹಾಗೂ ಶಿಲ್ಪಕಲೆ ವಿಭಾಗದಲ್ಲಿ ಜನಾರ್ದನ ಮೂರ್ತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ ಲಭಿಸಿದೆ. ಕೊರೋನಾ ಹಿನ್ನೆಲೆ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಮುಂದಾಗಿರುವ ಸರ್ಕಾರ ಇದೀಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದವರ ಪಟ್ಟಿ ಬಿಡುಗಡೆ ಮಾಡಿದೆ. ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ. : - - –