ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲರ ಹತ್ಯೆ ಕೇಸ್: ಶಿಕ್ಷಕರು ಸೇರಿ ಐದು ಮಂದಿ ಹಂತಕರ ಬಂಧನ… ಮೈಸೂರು,ಅಕ್ಟೋಬರ್, 28,2020(..):ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನ ಭೇದಿಸುವಲ್ಲಿ ಮೈಸೂರಿನ ಸರಸ್ವತಿಪುರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಫಾರಿ ಕೊಟ್ಟು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರನ್ನ ಹತ್ಯೆಗೈದಿದ್ದ ಶಿಕ್ಷಕರು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ಸಂಬಂಧ ಮೂವರು ಶಿಕ್ಷಕರು ಸೇರಿ ಐದು ಮಂದಿ ಹಂತಕರನ್ನ ಸರಸ್ವತಿಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಶ್ವ ಚೇತನ ಸಂಸ್ಕೃತ ಪಾಠಶಾಲೆಯ ಮುಖ್ಯಶಿಕ್ಷಕ ವಿಶ್ವನಾಥ್, ಸುಫಾರಿಗೆ ಮಧ್ಯಸ್ಥಿಕೆ ವಹಿಸಿದ್ದ ಮಡಿವಾಳಸ್ವಾಮಿ. ಸಂಸ್ಕೃತ ಪಾಠಶಾಲೆ ಮುಖ್ಯಶಿಕ್ಷಕ ಸಿದ್ದರಾಜು, ಸಹ ಶಿಕ್ಷಕ ಪರಶಿವ, ಗಾರೆ ಮೇಸ್ತ್ರಿ ನಿರಂಜನ್, ಬ್ಯಾಂಕ್ ರಿಕವರಿ ಆಫೀಸರ್ ನಾಗೇಶ್ ಬಂಧಿತ ಆರೋಪಿಗಳು. ಸೆಪ್ಟಂಬರ್.20 ರಂದು ಮೈಸೂರಿನ ಶಾರದಾದೇವಿ ನಗರದಲ್ಲಿ ನಿವೃತ್ತ ಪ್ರಾಂಶುಪಾಲರು ಪರಶಿವಮೂರ್ತಿ ಹತ್ಯೆಯಾಗಿದ್ದರು. ಸಂಬಳದಲ್ಲಿ ಹಣ ನೀಡುವಂತೆ ಪರಶಿವಮೂರ್ತಿ ನೀಡುತ್ತಿದ್ದ ಕಿರುಕುಳದಿಂದಾಗಿ ಬೇಸತ್ತು ಆರೋಪಿ ಶಿಕ್ಷಕರು ಹತ್ಯೆ ಮಾಡಿದ್ದರು ಎನ್ನಲಾಗಿದೆ. ಇದೀಗ ಮೈಸೂರಿನ ಸರಸ್ವತಿಪುರಂ ಪೊಲೀಸರು ಪ್ರಕರಣ ಬೇಧಿಸಿ ಆರೋಪಿಗಳನ್ನ ಬಂಧಿಸಿದ್ದಾರೆ. : - – - - -