ತಾಯಿ ಚಾಮುಂಡೇಶ್ವರಿ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ… ಮೈಸೂರು,ಅಕ್ಟೋಬರ್,27,2020(..):ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ತಾಯಿ ಚಾಮುಂಡಿಯ ಪಲ್ಲಕ್ಕಿ ರಥ ಎಳೆದು ಡಿಸಿ ರೋಹಿಣಿ ಸಿಂಧೂರಿ ಹರಕೆ ತೀರಿಸಿದ್ದಾರೆ. ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕುಟುಂಬ ತೆರಳಿತ್ತು. ಮೈಸೂರು ದಸರಾ ಹೊತ್ತಿನಲ್ಲೇ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು. ನಂತರ ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಡಿಸಿ ರೋಹಿಣಿ ಸಿಂಧೂರಿ ಹರಕೆ ಹೊತ್ತಿದ್ದರು. ಬಳಿಕ 9 ದಿನವೂ ಪಲ್ಲಕ್ಕಿ ರಥ ಎಳೆದು ಡಿಸಿ ರೋಹಿಣಿ ಸಿಂಧೂರಿ ಹರಕೆ ತೀರಿಸಿದ್ದಾರೆ. : -- – - –- .