ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ… ಬೆಂಗಳೂರು,ಅಕ್ಟೋಬರ್,26,2020(..):ಅಕ್ಟೋಬರ್ 28 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಅಕ್ಟೋಬರ್ 28ರ ಸಂಜೆ 6 ಗಂಟೆವರೆಗೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಆದೇಶಿಸಿದ್ದಾರೆ. ಹೀಗಾಗಿ 48 ಗಂಟೆಗಳ ಕಾಲ ಮದ್ಯಪ್ರಿಯರಿಗೆ ಮದ್ಯ ಸಿಗುವುದಿಲ್ಲ. ಅಕ್ಟೋಬರ್ 28 ರಂದು ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದ ಚುನಾವಣೆ ಇದ್ದು ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಹೀಗಾಗಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎನ್ನಲಾಗಿದೆ. : - –- - -