ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ… ದಾವಣಗೆರೆ,ಅಕ್ಟೋಬರ್,27,2020(..):ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನ ಹಿರಿಯ ಮುಖಂಡ ವೈ. ನಾಗಪ್ಪ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಒಬ್ಬ ಪುತ್ರ, ಮೂವರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿದ್ಧ ನಾಗಪ್ಪ, ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. : -. . - .