ಮೈಸೂರು ದಸರಾ-2020 : ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ ವೈ ಮೈಸೂರು,ಅಕ್ಟೋಬರ್,26,2020(..): ಅರಮನೆ ಆವರಣದಲ್ಲಿ ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಶುಭ ಮಕರ ಲಗ್ನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೇಯರ್ ತಸ್ನೀಂ ಸೇರಿ ಹಲವರು ಉಪಸ್ಥಿತರಿದ್ದರು. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಹಿನ್ನೆಲೆ ಈ ಬಾರಿ ಸರಳದಸರಾ ಆಚರಣೆ ಮಾಡಲಾಗುತ್ತಿದೆ ಎಂದರು. : -2020- -- -