ಆರ್.ಆರ್ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವರ್ಗಾವಣೆ… ಬೆಂಗಳೂರು,ಅಕ್ಟೋಬರ್,24,2020(..):ಆರ್. ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ಈ ಮಧ್ಯೆ ಆರ್.ಆರ್ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ನವೀನ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ ಆರ್ ನಗರ ವಿಧಾನಸಭಾ ಉಪಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಕಾಂಗ್ರೆಸ್ ನಾಯಕರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ದೂರು ದಾಖಲಿಸಲಾಗಿತ್ತು. ದೂರು ನೀಡಿದ ತಕ್ಷಣವೇ ಆರ್ ಆರ್ ನಗರ ಠಾಣೆ ಇನ್ಸ್ ಪೆಕ್ಟರ್ ನವೀನ್ ಎಫ್‌ಐಆರ್ ದಾಖಲಿಸಿದ್ದರು. ನಂತರ ಆರ್.ಆರ್ ನಗರ ಇನ್ಸ್ ಪೆಕ್ಟರ್ ರನ್ನ ವರ್ಗಾವಣೆ ಮಾಡುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಬೆನ್ನಲ್ಲೇ ಆರ್.ಆರ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಅವರನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಜಾಗಕ್ಕೆ ಮಲ್ಲೇಶ್ವರಂನ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅನಿಲ್ ಆರ್ ಪಿ ಅವರನ್ನು ನೇಮಕ ಮಾಡಲಾಗಿದೆ. ನವೀನ್ ಅವರನ್ನ ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಮಾಡಲಾಗಿದೆ. : - – - .