ಕುರುಬ ಸಮಾಜವನ್ನು ಎಸ್ ಟಿ ಸೇರಿಸಲು ಒತ್ತಾಯ: ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜೊತೆ ಸಚಿವ ಕೆ.ಎಸ್ ಈಶ್ವರಪ್ಪ ಚರ್ಚೆ… ದಾವಣಗೆರೆ, ಅಕ್ಟೋಬರ್,24,2020(..):ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ದಾವಣಗೆರೆಯ ಹರಿಹರ ಬಳಿ ಇರುವ ಬೆಳ್ಳೋಡಿ ಕನಕ ಗುರು ಪೀಠಕ್ಕೆ ಭೇಟಿ ನೀಡಿದರು. ಕುರುಬ ಸಮುದಾಯವನ್ನು ಎಸ್.ಟಿಗೆ ಸೇರಿಸುವಂತೆ ಸಮುದಾಯದ ನಾಯಕರು ಮತ್ತು ಮುಖಂಡರು ಒತ್ತಾಯಿಸುತ್ತಿದ್ದು ಈ ಸಂಬಂಧ ಇಂದು ಕನಕ ಗುರು ಪೀಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜತೆ ಚರ್ಚೆ ನಡೆಸಿದರು. ಎಸ್ ಟಿಗೆ ಸೇರಿಸಲು ಸರ್ಕಾರಕ್ಕೆ ಒತ್ತಡ ಹಾಕಲು ಪೂರ್ವಾಭಾವಿ ಸಭೆ ನಡೆಸಿದ್ದು ಸಭೆಯಲ್ಲಿ ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. : -- - – - .