ಶಿರಾ ಉಪಚುನಾವಣೆ ಪ್ರಚಾರ : ಶ್ರೀ ರೇವಣಸಿದ್ದೇಶ್ವರ ಕನಕ ಗುರುಮಠಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ತುಮಕೂರು,ಅಕ್ಟೋಬರ್,23,2020(..): ಕೊರಟಗೆರೆ ತಾಲ್ಲೂಕಿನ ಶ್ರೀ ರೇವಣಸಿದ್ದೇಶ್ವರ ಕನಕ ಗುರುಪೀಠ ಸಿದ್ದರಬೆಟ್ಟ ಗುರುಮಠಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು. ಶಿರಾ ಉಪಚುನಾವಣೆ ಪ್ರಚಾರಕ್ಕೆ ಹೋಗುವ ವೇಳೆ ಮಾರ್ಗ ಮದ್ಯ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟದ ಕನಕಗುರು ಮಠಕ್ಕೆ ಭೇಟಿ ನೀಡಿ ಶ್ರೀ ಈಶ್ವರಾನಂದಪುರಿ ಮಹಾ ಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭ ಕನಕ ಗುರು ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸಿಸಿ ರಸ್ತೆ ನಿರ್ಮಾಣ ಮಾಡಲು ಅಂದಾಜು ಪಟ್ಟಿ ತಯಾರಿಸುವಂತೆ ಹಾಗೂ ಮಠಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ನಿರ್ಮಾಣ ಮಾಡಲು ಅಂದಾಜು ಪಟ್ಟಿ ತಯಾರು ಮಾಡಿ ಕಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುರ್ತು ಹಣ ಬಿಡುಗಡೆ ಮಾಡುವುದಾಗಿ ವಿಶ್ವಾಸವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕುಂಚಿಟಿಗ ಮಹಾಸಂಸ್ಥಾನ ಮಠದ ಹೊಸದುರ್ಗ ಪೀಠಾಧ್ಯಕ್ಷರಾದ ಶಾಂತವೀರ ಸ್ವಾಮೀಜಿ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು. : --- ..-- --