ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಗೆ ಹೃದಯಾಘಾತ ಬೆಂಗಳೂರು, ಅಕ್ಟೋಬರ್,23,2020(..): ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕಪಿಲ್ ದೇವ್ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಪತ್ರಕರ್ತೆ ಟೀನಾ ಠಾಕರ್ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 61 ವರ್ಷದ ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. : - ---