ಮಳೆಯಿಂದ ಮನೆಕುಸಿತ: ತಂದೆ ಮಗ ಇಬ್ಬರು ಸಾವು… ಚಿಕ್ಕಬಳ್ಳಾಪುರ, ಅಕ್ಟೋಬರ್,23,2020(..): ಮಳೆಯಿಂದಾಗಿ ಮನೆ ಕುಸಿದು ತಂದೆ ಮತ್ತು ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ ರವಿಕುಮಾರ್(40), ಮಗ ರಾಹುಲ್(12) ಮೃತಪಟ್ಟವರು. ಈ ವೇಳೆ ತಾಯಿ ಮಗಳ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆ ಕುಸಿದು ಈ ದುರ್ಘಟನೆ ಸಂಭವಿಸಿದ್ದು ಈ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -- - – – -