ಕೆಎಎಸ್ ಅಧಿಕಾರಿ ಮನೆ ಕಚೇರಿ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ… ಗದಗ,ಅಕ್ಟೋಬರ್,22.2020(..):ಇಂದು ಬೆಳ್ಳಂಬೆಳಿಗ್ಗೆಯೇ ಗದಗ ನಗರಾಭಿವೃದ್ಧಿ ಅಧಿಕಾರಿ ನಿವಾಸ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜ‌ನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಅವರ ಮನೆ, ಕಚೇರಿ ಸೇರಿದಂತೆ ಮೂರು ಕಡೆ ಗುರುವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನ ಮನೆ ಫಾರ್ಮ್ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಗದಗದಲ್ಲಿನ ಮನೆ ಕಚೇರಿ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ದಾಳಿ ನಡೆದಿದೆ. ಇನ್ನು ದಾಳಿ ವೇಳೆ 250 ಗ್ರಾಂ ಚಿನ್ನಾಭರಣ, 1.50 ಲಕ್ಷ ನಗದು ಪತ್ತೆಯಾಗಿದೆ ಎನ್ನಲಾಗಿದೆ. : - - – ’- - .