ಒಂದು ವಾರದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿ- ಸಿಎಂ ಬಿಎಸ್ ವೈ ಸೂಚನೆ ಬೆಂಗಳೂರು,ಅಕ್ಟೋಬರ್,21,2020(..): ಶಿಕ್ಷಕರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಒಂದು ವಾರದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ, ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಲ್ಲಿಸಲಾಗಿದ್ದ ವರ್ಗಾವಣೆ ಸಂಬಂಧದ ಮನವಿಗೆ ಸ್ಪಂದಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ,ಈ ಪತ್ರದ ದಿನಾಂಕದಿಂದ ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಆದೇಶಿಸಿದ್ದಾರೆ. ಶಾಲಾ, ಕಾಲೇಜು ಶಿಕ್ಷಕರು, ಉಪನ್ಯಾಸಕರು ವರ್ಗಾವಣೆ ಸೌಲಭ್ಯಗಳಿಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೇ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಿಎಂಗೆ ಮನವಿ ಮಾಡಿದ್ದರು. : - - - –- -