ಬೈಕ್ ‌ಗೆ ಕಾರು ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು… ಮೈಸೂರು,ಅಕ್ಟೋಬರ್,21,2020(..): ನಂಜನಗೂಡು ಊಟಿ ರಸ್ತೆಯ ಹೊಸಹಳ್ಳಿ ಗೇಟ್ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಹೊಸಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಮೃತಪಟ್ಟವರಾಗಿದ್ದಾರೆ. ಹುಣಸನಾಳು ಗ್ರಾಮದಿಂದ ನಂಜನಗೂಡಿಗೆ ಸ್ಕೂಟರ್‌ನಲ್ಲಿ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ನಂಜನಗೂಡಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : ---