ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ… ಬೆಂಗಳೂರು,ಅಕ್ಟೋಬರ್, 20,2020(..):ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು. ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ ವಿತರ‌ಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ‌ವಿತರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು. : - – - - –-