ಮೈಸೂರು ವಿವಿ 100ನೇ ಘಟಿಕೋತ್ಸವ: ಅನುಪಸ್ಥಿತಿ ನಡುವೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮೈಸೂರು, ಅಕ್ಟೋಬರ್ 19, 2020 (..):ಇನ್ಫೋಷಿಸ್ ಫೌಂಡೇಷನ್’ನ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇಂದು ಕ್ರಾಫರ್ಡ್ ಹಾಲ್ ನಲ್ಲಿ ನಡೆದ 100ನೇ ಘಟಿಕೋತ್ಸವದಲ್ಲಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಪ್ರದಾನ ಮಾಡುತ್ತಿರುವುದಾಗಿ ಹೇಳಿದರು. ಸಮಾಜ ಸೇವೆ, ಶಿಕ್ಷಣ, ಸಾಹಿತ್ಯ ಕ್ಷೇತ್ರಗಳಲ್ಲಿ ಸುಧಾಮೂರ್ತಿ ಅವರ ಸೇವೆಯನ್ನು ಇದೇ ವೇಳೆ ಕುಲಪತಿಗಳು ಸ್ಮರಿಸಿದರು.