ಬೊಲೆರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ : ಇಬ್ಬರು ಸಾವು… ಮೈಸೂರು,ಅಕ್ಟೋಬರ್,18,2020(..):ಬೊಲೆರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಯಲಚಗೆರೆ ಬೋರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪುಟ್ಟಸ್ವಾಮಿ (23) ನಾಗರಾಜ್ (37) ಮೃತಪಟ್ಟವರು. ಮೃತಪಟ್ಟ ಇಬ್ಬರು ಕೂಡ್ಲಾಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಪುಟ್ಟಸ್ವಾಮಿ ಹಾಗೂ ನಾಗರಾಜ್ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಬೊಲೊರೋ ವಾಹನ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – –- -