ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಆರೋಪಿಗಳ ಬಂಧನ: ಎನ್ ಐಎಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ. ಮೈಸೂರು,ಏಪ್ರಿಲ್, 13, 2024 (..): ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನ ಬಂಧಿಸಿದ ಎನ್ ಐಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಆರೋಪಿಗಳನ್ನ ಹಿಡಿಯುವಲ್ಲಿ ಎನ್ ಐಎ ಯಶಸ್ವಿಯಾಗಿದೆ. ರಾಜ್ಯ ಪೊಲೀಸರು ಸಹ ಎನ್ ಐಎ ಅಧಿಕಾರಿಗಳಿಗೆ ಸಾಥ್ ನೀಡಿದ್ದಾರೆ. ಹೀಗಾಗಿ ಎನ್ ಐಎ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ವಿಚಾರಣೆ ನಂತರ ಮತ್ತಷ್ಟು ವಿಷಯ ತಿಳಿದು ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. : , ,