ಅ.21ರಿಂದ ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ… ಬೆಂಗಳೂರು,ಅಕ್ಟೋಬರ್,18,2020(..):ಉತ್ತರ ಕರ್ನಾಟಕ ಭಾಗದಲ್ಲಿ ಜನತೆ ಪ್ರವಾಹಕ್ಕೆ ಸಿಲುಕಿ ನಲುಗಿದ್ದು ಈ ನಡುವೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಅಕ್ಟೋಬರ್ 21 ರಿಂದ ನೆರೆಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಕಲ್ಬುರ್ಗಿ, ಬೀದರ್, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ ನಡೆಸಿ ಮಳೆಹಾನಿ ವಾಸ್ತವ ಸ್ಥಿತಿ ಅರಿಯಲಿದ್ದಾರೆ. ಭಾರಿ ಮಳೆ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದ್ದು ಈ ಹಿನ್ನೆಲೆ ಭೀಮಾನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು ನದಿ ಪಾತ್ರದ ಗ್ರಾಮಗಳು ಪ್ರವಾಹದ ಹೊಡೆತಕ್ಕೆ ಸಿಲುಕಿ ನಲು ಗಿವೆ. : - -- - – 21.