ಪತ್ರಕರ್ತರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು : ದಿನೇಶ್ ಗುಂಡೂರಾವ್ ಟ್ವೀಟ್ ಬೆಂಗಳೂರು,ಅಕ್ಟೋಬರ್,18,2020(..): ಪತ್ರಕರ್ತರನ್ನೂ ಕೊರೊನಾ ಸೇನಾನಿಗಳು ಎಂದು ಸರ್ಕಾರ ಪರಿಗಣಿಸಬೇಕು. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. ಪತ್ರಕರ್ತ ಪವನ್ ಹೆತ್ತೂರು ಕೋವಿಡ್ ನಿಂದ ಸಾವಿಗೀಡಾಗಿರುವುದು ದುರ್ದೈವದ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಪತ್ರಕರ್ತರನ್ನೂ ಕೊರೊನಾ ಸೇನಾನಿಗಳು ಎಂದು ಸರ್ಕಾರ ಪರಿಗಣಿಸಬೇಕು. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು.‌ ಪವನ್‌ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಟ್ವೀಟರ್ ನಲ್ಲಿ ಒತ್ತಾಯಿಸಿದ್ದಾರೆ. : --’----- -