ಒಂದು ದಿನ ಮಾತ್ರ ಸರಳ ಹಂಪಿ ಉತ್ಸವ ಆಚರಣೆ-ಸಚಿವ ಆನಂದ್ ಸಿಂಗ್… ಬಳ್ಳಾರಿ,ಅಕ್ಟೋಬರ್,17,2020(..):ಕೊರೋನಾ ಹಿನ್ನೆಲೆ ಈ ಬಾರಿ ಸರಳವಾಗಿ ಒಂದು ದಿನ ಮಾತ್ರ ಹಂಪಿ ಉತ್ಸವ ಆಚರಣೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು. ಬಳ್ಳಾರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆನಂದ್ ಸಿಂಗ್ ಕೊರೋನಾ ಹಿನ್ನೆಲೆ ಈ ಬಾರಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ನವೆಂಬರ್ 5ರವರೆಗೆ ನೀತಿಸಂಹಿತೆ ಜಾರಿ ಇದೆ. ನೀತಿ ಸಂಹಿತೆ ಮುಗಿದ ನಂತರ ಹಂಪಿ ಸ್ವಾಮೀಜಿಗಳ ಜತೆ ಮಾತನಾಡಿ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ಉತ್ಸವಗಳನ್ನು ಸರಳವಾಗಿ ಆಚರಿಸಲಾಗಿತ್ತಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಮಧ್ಯೆ ಹಂಪಿ ಉತ್ಸವವನ್ನೂ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸುವುದಾಗಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. : - - - - - .