ನಾಳೆ ದಸರಾ ಮಹೋತ್ಸವ ಉದ್ಘಾಟನೆ ಹಿನ್ನೆಲೆ: ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್ ವೈ: ಜಿಲ್ಲಾಡಳಿತ ವತಿಯಿಂದ ಸ್ವಾಗತ… ಮೈಸೂರು,ಅಕ್ಟೋಬರ್,16,2020(..): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ ಉದ್ಘಾಟನೆಯಾಗಲಿದ್ದು ಈ ಹಿನ್ನೆಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮೈಸೂರಿಗೆ ಬಂದಿಳಿದಿದ್ದಾರೆ. ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಯಾಗಲಿದ್ದು ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ದಸರಾ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಶೇಷ ವಿಮಾನ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಜಿಲ್ಲಾಡಳಿತ ಆತ್ಮೀಯವಾಗಿ ಬರಮಾಡಿಕೊಂಡಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವರು ಸಿಎಂ ಬಿಎಸ್ ಯಡಿಯೂರಪ್ಪಗೆ ಸ್ವಾಗತ ಕೋರಿದರು. ಬಳಿಕ ಸಿಎಂ ಬಿಎಸ್ ವೈ ನಜರಬಾದ್ ನ ಸರ್ಕಾರಿ ಅತಿಥಿಗೃಹದತ್ತ ತೆರಳಿದರು. ಇಂದು ಸಿಎಂ ಬಿಎಸ್ ವೈ ನೇತೃತ್ವದಲ್ಲಿ ದಸರಾ ಆಚರಣೆ ಮತ್ತು ಕೋರೋನಾ ಕುರಿತು ಸಭೆ ನಿಗದಿಯಾಗಿದೆ. ಕೊರೋನಾ‌ ಹಾಗೂ ದಸರಾ ಸಿದ್ದತೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದು ಸಭೆಯಲ್ಲಿ ಸಚಿವ ಎಸ್‌ಟಿ ಸೋಮಶೇಖರ್, ಸಂಸದ ಪ್ರತಾಪ್‌ ಸಿಂಹ, ಶಾಸಕರು ಸೇರಿದಂತೆ ಅಧಿಕಾರಿಗಳ ಉಪಸ್ಥಿತರಿರಲಿದ್ದಾರೆ. ಸಭೆಯಲ್ಲಿ ಸಿಎಂ ಬಿಎಸ್ ವೈ ದಸರೆಯ ಕೊನೆ ಹಂತದ ಸಿದ್ದತೆ ಬಗ್ಗೆ‌ ಮಾಹಿತಿ ಕೇಳಲಿದ್ದಾರೆ. ಇನ್ನು ಸಭೆಯಲ್ಲಿ ಕೊರೋನಾ‌ ನಿಯಂತ್ರಣದ ಬಗ್ಗೆಯು ಚರ್ಚೆ ನಡೆಯಲಿದೆ. : - - – -