ಇಂದು ಸಂಜೆ ನೀಟ್ ಫಲಿತಾಂಶ ಪ್ರಕಟ ಬೆಂಗಳೂರು,ಅಕ್ಟೋಬರ್,16,2020(..): ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಲಿದೆ.ಕೋವಿಡ್ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗದಿದ್ದವರಿಗೆ ಅ.14 ರಂದು ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆದಿದ್ದು, ನೋಂದಾಯಿಸಿಕೊಂಡಿದ್ದ 15.9 ಲಕ್ಷ ಅಭ್ಯರ್ಥಿಗಳಲ್ಲಿ ಶೇ.90 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ವೀಕ್ಷಣೆಗೆ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶವನ್ನು .. ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಅಡ್ಮಿಟ್​ ಕಾರ್ಡ್​ನಲ್ಲಿ ತಮ್ಮ ರೋಲ್ ನಂಬರ್ ದಾಖಲಿಸಬೇಕು. ನಂತರ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. : ---4pm-