ಚಾಮುಂಡಿ ಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ: ಉದ್ಘಾಟನಾ ಸಮಾರಂಭ ಸಿದ್ಧತೆ ಪರಿಶೀಲನೆ… ಮೈಸೂರು,ಅಕ್ಟೋಬರ್,15,2020(..):ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭ ಅಕ್ಟೋಬರ್ 17 ರಂದು ನಡೆಯಲಿದ್ದು, ಈ ಹಿನ್ನೆಲೆ ಇಂದು ಚಾಮುಂಡಿಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ ನೀಡಿ ಸಿದ್ದತೆ ಪರಿಶೀಲನೆ ನಡೆಸಿದರು. ಅಕ್ಟೋಬರ್ 17 ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನಾ ಸಮಾರಂಭ ನಡೆಯಲಿದ್ದು ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಈಗಾಗಲೇ ಮೈಸೂರು ಜಿಲ್ಲಾಡಳಿತ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಾಗೆಯೇ ಚಾಮುಂಡಿಬೆಟ್ಟದ ಮೇಲೆ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಈ ಮಧ್ಯೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ಕಮಿಷನರ್ ಭೇಟಿ ವೇಳೆ ಅಪರಾಧ ಮತ್ತು ಸಂಚಾರ ಡಿಸಿಪಿ ಗೀತಾ ಹಾಜರಿದ್ದರು. : - .- –- - -