ಪೊಲೀಸ್ ಬಿಗಿ ಭದ್ರತೆಯಲ್ಲಿ ಮಹಿಷಾ ದಸರಾ ಆಚರಣೆ : ಪುರುಷೋತ್ತಮ್, ಪ್ರೊ.ಮಹೇಶ್ ಚಂದ್ರಗುರು ಸೇರಿ ಹಲವರು ಭಾಗಿ….. ಮೈಸೂರು,ಅಕ್ಟೋಬರ್,15,2020(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ವಿರೋಧದ ನಡುವೆ ಮಹಿಷಾ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷಾ ದಸರಾ ಆಚರಣೆ ಮಾಡಲಾಯಿತು. ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಸರಳವಾಗಿ ಮಹಿಷಾ ದಸರಾ ಆಚರಣೆ ಮಾಡಲಾಯಿತು. ಪೋಲಿಸ್ ಸರ್ಪಗಾವಲಿನಲ್ಲಿ ಮಹಿಷಾ ಭಾವಚಿತ್ರಕ್ಕೆ ಆಚರಣಾ ಸಮಿತಿ ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿದರು.ಪೊಲೀಸ್ ಬಿಗಿ ಭದ್ರತೆಯಲ್ಲಿ ಮಹಿಷಾ ದಸರಾ ಆಚರಣೆ ಕಾರ್ಯಕ್ರಮ ನೆರವೇರಿತು. ಈ ವೇಳೆ ಪುರುಷೋತ್ತಮ್, ಜ್ಞಾನಪ್ರಕಾಶ ಸ್ವಾಮೀಜಿ, ಸಿದ್ದರಾಮು ಸ್ವಾಮೀಜಿ ಹಾಗೂ ಮಹೇಶ್ ಚಂದ್ರಗುರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಈ ವೇಳೆ ಯಾವುದೇ ಮೆರವಣಿಗೆ, ವೇದಿಕೆ ಕಾರ್ಯಕ್ರಮಕ್ಕೆ ಪೋಲಿಸರು ಅನುಮತಿ ಇರಲಿಲ್ಲ. : - -- -