ರಾತ್ರೋರಾತ್ರಿ ಅತ್ಯಾಚಾರ ಸಂತ್ರಸ್ತೆಯ ಅಂತ್ಯ ಸಂಸ್ಕಾರ: ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ : ಅಲಹಾಬಾದ್ ಹೈಕೋರ್ಟ್ ಬೆಂಗಳೂರು,ಅಕ್ಟೋಬರ್,14,2020(..) :ಉತ್ತರ ಪ್ರದೇಶ ಹಥ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯಾದ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿರುವುದು ಮಾನವ ಹಕ್ಕುಗಳಿಗೆ ವಿರುದ್ಧ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.ಹೈಕೋರ್ಟ್ ನ್ಯಾ.ಪಂಕಜ್ ಮಿತ್ತಲ್ ಹಾಗೂ ನ್ಯಾ.ರಂಜನ್ ರಾಯ್ ಅವರಿದ್ದ ವಿಭಾಗೀಯ ಪೀಠವು ವಾಸ್ತವಾಸಂಶಗಳು, ಪರಿಸ್ಥಿತಿಗಳು ಹಾಗೂ ಈ ಹಿಂದಿನ ಅಂಶಗಳನ್ನು ಪರಿಗಣಿಸಿದ ಬಳಿಕ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಂತ್ರಸ್ತೆಯ ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರಿಗೆ ಸ್ವಲ್ಪ ಕಾಲವೂ ಹಸ್ತಾಂತರಿಸದೇ ಅಂತ್ಯಕ್ರಿಯೆ ನಡೆಸಿರುವುದು ಮಾನವ ಹಕ್ಕುಗಳ ಸ್ಪಷ್ಟವಾದ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ. ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಈ ರೀತಿ ಮಾಡಿರುವುದು ಸೂಕ್ತವಲ್ಲ. ಪಾರ್ಥಿವ ಶರೀರವನ್ನು ಹಸ್ತಾಂತರಿಸದೇ ಇರಲು ಯಾವುದೇ ಕಾರಣಗಳು ತಮಗೆ ಕಾಣುತ್ತಿಲ್ಲ. ದಹನ ಕ್ರಿಯೆ ಸಂಸ್ಕಾರಗಳಲ್ಲಿ ಅತ್ಯಂತ ಮುಖ್ಯವಾದದ್ದು, ಅದರಲ್ಲಿ ಕಾನೂನು ಸುವ್ಯವಸ್ಥೆಗಳ ಕಾರಣ ನೀಡಿ ರಾಜಿಮಾಡಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. : --’------