17 ಶಾಸಕರ ಋಣ ತೀರಿಸುವ ಜವಾಬ್ದಾರಿ ನಮ್ಮದು- ಸಚಿವ ಕೆ.ಎಸ್ ಈಶ್ವರಪ್ಪ ಬೆಂಗಳೂರು,ಅಕ್ಟೋಬರ್,13,2020(..):17 ಶಾಸಕರಿಂದಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ 17 ಶಾಸಕರ ಋಣ ತೀರಿಸುವ ಜವಾಬ್ದಾರಿ ನಮ್ಮದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಅಂದು 17 ಶಾಸಕರು ರಾಜೀನಾಮೆ ನೀಡದೇ ಇದ್ದಿದ್ದರೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ. ಹೀಗಾಗಿ 17 ಶಾಸಕರ ಋಣ ತೀರಿಸುವ ಜವಾಬ್ದಾರಿ ನಮ್ಮದು. ಬಿಜೆಪಿ ಪಕ್ಷ ಆ ಶಾಸಕರ ಋಣ ತೀರಿಸುವ ಕೆಲಸ ಮಾಡಲಿದೆ ಎಂದು ನುಡಿದರು. ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯಿಂದ‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ, ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ. ಮುನಿರತ್ನ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತ ಮಾಡುತ್ತೇವೆ. ಆರ್ ಆರ್ ನಗರ, ಶಿರಾ ಜೊತೆಗೆ ವಿಧಾನ ಪರಿಷತ್ ನ ಶಿಕ್ಷಕರು, ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. : –17 -- .