ಯುವರತ್ನ ಚಿತ್ರೀಕರಣ ಪೂರ್ಣ: ಇನ್ನೇನಿದ್ದರೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರು, ಅಕ್ಟೋಬರ್ 13, 2020 (..):ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ. ಲಾಕ್‌ಡೌನ್‌ನಿಂದ ಕೊನೆಯ ಹಂತದ ಶೂಟಿಂಗ್ ಸ್ಥಗಿತಗೊಳಿಸಿದ್ದ ಚಿತ್ರತಂಡ ಈಗ ಸಂಪೂರ್ಣವಾಗಿ ಮುಗಿಸಿದೆ. ಕೊನೆಯ ದಿನದ ಚಿತ್ರೀಕರಣದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಾಯಕಿ ಸಯೇಶಾ ಸೈಗಲ್ ಭಾಗಿಯಾಗಿದ್ದರು. ಈ ವೇಳೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್, ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸಹ ಪಾಲ್ಗೊಂಡಿದ್ದರು. ಈ ಸಂತಸವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.