ಡಿಸಿಎಂ ಅಶ್ವಥ್ ನಾರಾಯಣ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸ್ಕೃತ ವಿವಿ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್ ಬೆಂಗಳೂರು,ಅಕ್ಟೋಬರ್,12,2020(..): ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್, ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಸೋಮವಾರ ಸೌಜನ್ಯದ ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ ಕಚೆರಿಯಲ್ಲಿ ನಡೆದ ಈ ಭೇಟಿಯ ವೇಳೆ ದೇವನಾಥನ್ ಅವರು ಡಾ.ಅಶ್ವತ್ಥನಾರಾಯಣ ಅವರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ, ಮುಂದಿನ ದಿನಗಳಲ್ಲಿ ವಿವಿಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳಿಗೆ ಸರಕಾರದ ಸಹಕಾರವನ್ನು ಕೇಳಿದರು. ವಿವಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನೂ ನೀಡುವುದಾಗಿ ಇದೇ ವೇಳೆ ಡಿಸಿಎಂ ಭರವಸೆ ನೀಡದರು. : - - – -