ಬಿಜೆಪಿ ಸೇರ್ಪಡೆಯಾದ ಹಿರಿಯ ನಟಿ ಖುಷ್ಬೂ… ನವದೆಹಲಿ,ಅಕ್ಟೋಬರ್,12,2020(..):ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಹಿರಿಯ ನಟಿ ಖುಷ್ಬೂ ಇದೀಗ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಸಮ್ಮುಖದಲ್ಲಿ ನಟಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅಧಿಕೃತವಾಗಿ ಪಕ್ಷದ ಸದಸ್ಯತ್ವವನ್ನು ನೀಡುವ ಮೂಲಕ ಖುಷ್ಬೂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಂದು ಬೆಳಿಗ್ಗೆಯಷ್ಟೆ ನಟಿ ಖುಷ್ಬೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಎಐಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. : – - –