ಮೈಸೂರು ದಸರಾ ಉದ್ಘಾಟನೆಗೆ ಸಿ.ಎನ್ ಮಂಜುನಾಥ್ ಅವರಿಗೆ ಅಧಿಕೃತ ಆಹ್ವಾನ.. ಮೈಸೂರು,ಅಕ್ಟೋಬರ್,12,2020(..):ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಆಯ್ಕೆಯಾಗಿರುವ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಜಿಲ್ಲಾಡಳಿತ ವತಿಯಿಂದ ಅಧಿಕೃತವಾಗಿ ಆಹ್ವಾನ ನೀಡಿದರು. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಎಸ್.ಟಿ ಸೋಮಶೇಖರ್ , ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ದಸರಾ ಉದ್ಘಾಟನೆಗೆ ಆಗಮಿಸುವಂತೆ ಸಿ.ಎನ್ ಮಂಜುನಾಥ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಅಕ್ಟೋಬರ್ 17 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಅವರು ಮೈಸೂರು ದಸರಾ ಉದ್ಘಾಟಿಸಲಿದ್ದು ಕಾರ್ಯಕ್ರಮದಲ್ಲಿ ಆರು ಮಂದಿ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಮಾಡಲಾಗುತ್ತದೆ. : -2020- - - - –