ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿ ಸಾವು ಯಾದಗಿರಿ,ಅಕ್ಟೋಬರ್,11,2020(..): ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ನರಪ್ಪಗೆ ಸೇರಿದ ಕುರಿಗಳಾಗಿವೆ. ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. : -20--