ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು : ಸಚಿವ ಕೆ.ಎಸ್.ಈಶ್ವರಪ್ಪ ಬೆಂಗಳೂರು,ಅಕ್ಟೋಬರ್,11,2020(..): ಕುರುಬ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದವಿಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. : -------..