ಟೀಂ ಮೈಸೂರು ಮತ್ತು ಜಯದೇವ ಹೃದ್ರೋಗ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ: ಹಲವರು ಭಾಗಿ ಮೈಸೂರು,ಅಕ್ಟೋಬರ್,11,2020(..):ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಸಲುವಾಗಿ ಟೀಮ್ ಮೈಸೂರು ಮತ್ತು ಜಯದೇವ ಹೃದ್ರೋಗ ಸಂಸ್ಥೆ ಸಹಯೋಗದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರು ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥ ಡಾ. ಸದಾನಂದ ಅವರು ಗಿಡ ನೆಡುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ವಚ್ಛತೆ ಹಾಗೂ ಆರೋಗ್ಯದ ಮಹತ್ವ ಕುರಿತು ಡಾ. ಸದಾನಂದ ಅವರು ಮಾಹಿತಿ ನೀಡಿದರು. ಕಾರ್ಯಕ್ರಮ ಅಂಗವಾಗಿ ಟೀಂ ಮೈಸೂರು ಸದಸ್ಯರು ಜಯದೇವ ಆಸ್ಪತ್ರೆಯ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಸ್ವಚ್ಛತಾ ಕಾರ್ಯದಲ್ಲಿ ಪಾಲಿಕೆ ಸದಸ್ಯ ಎಸ್ಬಿಎಂ ಮಂಜು, ಟೀಂ ಮೈಸೂರು ತಂಡದ ಸಂಚಾಲಕ ಗೋಕುಲ್ ಗೋವರ್ಧನ್, ವೈದ್ಯರಾದ ಅಷ್ಟ ಬಸಪ್ಪ, ಸಂತೋಷ್ ಸೇರಿದಂತೆ ಟೀಂ ಮೈಸೂರು ತಂಡದ ಸದಸ್ಯರು ಭಾಗಿಯಾಗಿದ್ದರು. : - – –