ಸಚಿವ ಎಸ್.ಸುರೇಶ್ ಕುಮಾರ್ ಹೋಂ ಐಸೋಲೇಷನ್ ನಿಂದ ಆಸ್ಪತ್ರೆಗೆ ದಾಖಲು ಬೆಂಗಳೂರು,ಅಕ್ಟೋಬರ್,11,2020(..): ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ ನಲ್ಲಿದ್ದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸ್ವತಃ ಸುರೇಶ್ ಕುಮಾರ್ ಅವರು ಈ ವಿಷಯವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದಿದ್ದಾರೆ. ಹೋಂ ಐಸೋಲೇಷನ್ ನಲ್ಲಿದ್ದರೂ ಸಚಿವರು ಆನ್‍ಲೈನ್ ಮೂಲಕ ಸರ್ಕಾರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಫೇಸ್‍ಬುಕ್ ಲೈವ್ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. : -. ---