ವಿದ್ಯಾಗಮ ತಾತ್ಕಾಲಿಕ ಸ್ಥಗಿತ : ಸಚಿವ ಸುರೇಶ್ ಕುಮಾರ್ ಬೆಂಗಳೂರು,ಅಕ್ಟೋಬರ್,10,2020(..): ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ. ವಿದ್ಯಾಗಮ ಯೋಜನೆಯಿಂದಾಗಿ ಅನೇಕ ಶಿಕ್ಷಕರು ಕೊರೊನಾಗೆ ತುತ್ತಾಗಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕುರಿತು ಜಿಲ್ಲಾವಾರುಸಂಪೂರ್ಣ ಮಾಹಿತಿ ಪಡೆಯುವವರೆಗೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. : ---